Thursday, 18 January 2024

75ನೇ ಗಣರಾಜ್ಯೋತ್ಸವದ ಭಾಷಣ 2024

 ಎಲ್ಲರಿಗೂ ಶುಭ ಮುಂಜಾನೆ. ನಾನು ನಿಮಗೆಲ್ಲರಿಗೂ '75ನೇ ಗಣರಾಜ್ಯೋತ್ಸವದ ಶುಭಾಶಯಗಳು'. 'ಭಾರತದ ಗಣರಾಜ್ಯೋತ್ಸವ'ದ ಈ ಸಂತೋಷದ ಸಂದರ್ಭದಲ್ಲಿ ನಾನು ಒಂದನ್ನು ಹೇಳಲು ಬಯಸುತ್ತೇನೆ.


 ಗೌರವಾನ್ವಿತ ಮುಖ್ಯೋಪಾಧ್ಯಾರೇ, ಎಲ್ಲಾ ಸ್ವಯಂ ಸೇವಕ ಅತಿಥಿಗಳು, ನನ್ನ ಎಲ್ಲಾ ಶಿಕ್ಷಕರು, ಸ್ನೇಹಿತರು ಮತ್ತು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದವರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಈ ವಿಶೇಷ ದಿನದಂದು ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.


   ಜನವರಿ 26 ಭಾರತೀಯ ಇತಿಹಾಸದಲ್ಲಿ 'ಐತಿಹಾಸಿಕ

 ದಿನ' ಮತ್ತು ಇದನ್ನು ಪ್ರತಿ ವರ್ಷ ಭಾರತೀಯ ಗಣರಾಜ್ಯ ದಿನ ಎಂದು ಆಚರಿಸಲಾಗುತ್ತದೆ. ನಾವು ಎಲ್ಲಾ ಭಾರತೀಯರು ಭಾರತದ ರಾಷ್ಟ್ರೀಯ ಧ್ವಜಕ್ಕೆ ನಮ್ಮ ಘನತೆ ಮತ್ತು ಗೌರವವನ್ನು ತೋರಿಸುತ್ತೇವೆ, ಅದು ಈ ವಿಶೇಷ ದಿನದಂದು ಭಾರತದ ಹಲವಾರು ಸ್ಥಳಗಳಲ್ಲಿ ಹಾರುತ್ತದೆ. ಸರ್ಕಾರಿ ಕಚೇರಿಗಳು, ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು, ಬ್ಯಾಂಕ್‌ಗಳು ಮತ್ತು ಇನ್ನೂ ಹಲವು ಸ್ಥಳಗಳು. ಈ ದಿನದಂದು ದೇಶದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ.


   ನಮ್ಮ ಭಾರತಕ್ಕೆ 1947 ಆಗಸ್ಟ್ 15 ರಂದು ಸ್ವಾತಂತ್ರ್ಯ ಸಿಕ್ಕಿದ್ದು ನಿಜ. ನಾವು 1949 ರಲ್ಲಿ ನವೆಂಬರ್ 26 ರಂದು ನಮ್ಮ ಸಂವಿಧಾನವನ್ನು ಅಂಗೀಕರಿಸಿದ್ದೇವೆ ಆದರೆ ಭಾರತದ ಸಂವಿಧಾನವು 26 ಜನವರಿ 1950 ರಂದು ಜಾರಿಗೆ ಬಂದಿತು. ಭಾರತದ ಸಂವಿಧಾನವನ್ನು ಔಪಚಾರಿಕವಾಗಿ ಭಾರತದ ಸಂಸತ್ತು ಅಂಗೀಕರಿಸಿತು. ಮತ್ತು ಭಾರತವು ಜನವರಿ 26,1950 ರಂದು ತನ್ನನ್ನು ತಾನು 'ಗಣರಾಜ್ಯ ರಾಷ್ಟ್ರ' ಎಂದು ಘೋಷಿಸಿಕೊಂಡಿತು, ನಂತರ ಈ ದಿನವನ್ನು ಪ್ರತಿ ವರ್ಷ ಭಾರತದಲ್ಲಿ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ.


     ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡವು ಐರ್ಲೆಂಡ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ, ಅಮೇರಿಕಾ ಇತ್ಯಾದಿಗಳ ಸಂವಿಧಾನಗಳನ್ನು ಅಧ್ಯಯನ ಮಾಡುವ ಮೂಲಕ ನಮಗೆ ಈ ಸಂವಿಧಾನವನ್ನು ನೀಡಿದೆ. ಭಾರತೀಯ ಸಂವಿಧಾನವು ಎಲ್ಲಾ ದೇಶಗಳ ಸಂವಿಧಾನಕ್ಕಿಂತ ಸುದೀರ್ಘವಾದ ಸಂವಿಧಾನವಾಗಿದೆ. ಇದು ಸಮಾನತೆ, ರಾಜ್ಯಕ್ಕೆ ನಿರ್ದೇಶನ ತತ್ವಗಳು, ಎಲ್ಲರಿಗೂ ಸಾಮಾಜಿಕ ನ್ಯಾಯ ಇತ್ಯಾದಿಗಳನ್ನು ತೋರಿಸುತ್ತದೆ. ಈ ಸಂದರ್ಭವನ್ನು ಗುರುತಿಸಲು, ಹೊಸದಿಲ್ಲಿಯಲ್ಲಿ ಭವ್ಯವಾದ ಮೆರವಣಿಗೆಯನ್ನು ಆಯೋಜಿಸಲಾಗುವುದು, ಅದು ರಾಷ್ಟ್ರಪತಿ ಭವನ (ರಾಷ್ಟ್ರಪತಿ ಭವನ) ಬಳಿಯ ರೈಸಿನಾ ಹಿಲ್‌ನಿಂದ ರಾಜ್‌ಪಥ್, ಪಾಸ್ಟ್ ಇಂಡಿಯಾ ಗೇಟ್‌ನ ಉದ್ದಕ್ಕೂ ಮತ್ತು ನಗರದ ಹಳೆಯ ಕ್ವಾರ್ಟರ್‌ನಲ್ಲಿರುವ ಐತಿಹಾಸಿಕ ಕೆಂಪು ಕೋಟೆಗೆ ಕೊನೆಗೊಳ್ಳುತ್ತದೆ. . ವಿವಿಧ ಕಾಲಾಳುಪಡೆ, ಅಶ್ವದಳ ಮತ್ತು ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಯಾಂತ್ರೀಕೃತ ರೆಜಿಮೆಂಟ್‌ಗಳು ತಮ್ಮ ಎಲ್ಲಾ ಸೂಕ್ಷ್ಮ ಮತ್ತು ಅಧಿಕೃತ ಅಲಂಕಾರಗಳಿಂದ ಅಲಂಕರಿಸಲ್ಪಟ್ಟ ರಚನೆಯಲ್ಲಿ ಸಾಗುತ್ತವೆ. ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಆಗಿರುವ ಭಾರತದ ರಾಷ್ಟ್ರಪತಿಗಳು ಗೌರವ ವಂದನೆ ಸ್ವೀಕರಿಸುತ್ತಾರೆ.


    ಸಾಮಾನ್ಯವಾಗಿ, ಮೆರವಣಿಗೆಯು 1 ಲಕ್ಷಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವ ಉತ್ಸಾಹಭರಿತ ಕಾರ್ಯಕ್ರಮವಾಗಿದೆ. 'ಅತಿಥಿ ದೇವೋ ಭವ' ಎಂಬ ಅರ್ಥವನ್ನು ಪೂರೈಸಲು ಪ್ರತಿ ವರ್ಷವೂ ಇತರ ದೇಶದಿಂದ ಮುಖ್ಯ ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. 75 ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ದೇಶದ

ಅಧ್ಯಕ್ಷರಾದ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.


    ಇದು ಭಾರತದಲ್ಲಿ ಆಚರಿಸಲಾಗುವ ದಿನವಾಗಿದೆ ಮತ್ತು ಇದೇ ದಿನದಂದು ಜಾರಿಗೆ ಬಂದ ರಾಷ್ಟ್ರೀಯ ಸಂವಿಧಾನದ ಬಗ್ಗೆ ಪ್ರತಿಯೊಬ್ಬ ಭಾರತೀಯರು ತಮ್ಮ ಗೌರವ ಮತ್ತು ಹೆಮ್ಮೆಯನ್ನು ತೋರಿಸುತ್ತಾರೆ.


    ನಾನು ನಮ್ಮ ಸಂವಿಧಾನವನ್ನು ಗೌರವಿಸುತ್ತೇನೆ ಮತ್ತು ನಾನು ಭಾರತೀಯನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ನನ್ನ ಸ್ವಂತ ಕೆಲವು ಮಾತುಗಳನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನನಗೆ ಸ್ವಲ್ಪ ಸಮಯವನ್ನು ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು. ಈ ಹೆಮ್ಮೆಯ ಕ್ಷಣವನ್ನು ಆನಂದಿಸೋಣ.

ಜೈ ಹಿಂದ್


Wednesday, 29 November 2023

KANAKADAS JAYANTI 2024

ಕನಕದಾಸರು:[ತಿಮ್ಮಪ್ಪನಾಯಕ] (1509-1609):

ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸ ರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.

ಜೀವನ:
ಜನನ:- ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1487(1508-1606)ರಲ್ಲಿ ಕುರುಬ ಗೌಡ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.

ಸಾಧನೆ:
ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆ ಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.

ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ. ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ.

ಸಾಹಿತ್ಯ ರಚನೆ:

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆ ಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆ ಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ.


ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

1. ಮೋಹನತರಂಗಿಣಿ

2. ನಳಚರಿತ್ರೆ

3. ರಾಮಧಾನ್ಯ ಚರಿತೆ

4. ಹರಿಭಕ್ತಿಸಾರ

5. ನೃಸಿಂಹಸ್ತವ (ಉಪಲಬ್ದವಿಲ್ಲ).


*ಮೋಹನತರಂಗಿಣಿ*

ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯ ದಲ್ಲಿ ರಚಿತವಾಗಿರುವ 2700 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರ ಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯ ದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ. ಸೋಮಸೂರಿಯ ವೀಥಿಯ ಇಕ್ಕೆಗಳಲಿ ಹೇಮ ನಿರ್ಮಿತ ಸೌಧದೋಳಿ ರಮಣೀಯತೆವೆತ್ತ ಕಳಸದಂಗಡಿಯಿರ್ದುಂ ವಾ ಮಹಾ ದ್ವಾರಕಾಪುರದೇ ಓರಂತೆ ಮರಕಾಲರು ಹಡಗಿನ ವ್ಯವ ಹಾರದಿ ಗಳಿಸಿದ ಹಣವ ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು ಬೇರಂಗೆ ಕಡವ ಕೊಡುವರು.


*ನಳಚರಿತ್ರೆ*

ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತ ದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.


*ರಾಮಧಾನ್ಯಚರಿತೆ*

ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿ ಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿ ಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ. ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ? ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು.. ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿ ಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು.


*ಹರಿಭಕ್ತಿಸಾರ*

ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆ ಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.


ಕೀರ್ತನೆಗಳು:
ಕನಕದಾಸರು 316 ಕೀರ್ತನೆ ಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆ ಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ. ಜೈನ ,
ವೀರಶೈವ ರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯ ನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು. 'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು. ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ , ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜ ರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ . ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ . ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು. 

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ            ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ              ನೀ ದೇಹದೊಳಗೊ, ನಿನ್ನೊಳು ದೇಹವೂ                ಬಯಲು ಆಲಯದೊಳಗೊ, ಆಲಯವು ಬಯಲೊಳಗೊ ಬಯಲು ಆಲಯವೆರಡು ನಯನದೊಳಗೊ             ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ   ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ          ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ                      ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ            ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ ಕುಸುಮ ಗಂಧಗಳೆರಡು ಘ್ರಾಣದೊಳಗೊ          ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ.

 ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ         ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ           ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ               ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು         ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು                     ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/       ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು ದಾಯಾದಿ ಬಂಧುಗಳ ಬಿಡಲೂ ಬಹುದು                  ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು        ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/     ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು           ಮಾನದಲಿ ಮನವ ತಗ್ಗಿಸಬಹುದು                             ಜಾಣ ನಾಯಕನಾದ ಆದಿಕೇಶವರಾಯ                       ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು/೩/

ಚಲನಚಿತ್ರ :
ಡಾ. ರಾಜ್ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿರುವ 'ಭಕ್ತ ಕನಕದಾಸ ' ಚಲನಚಿತ್ರವು 1960ರಲ್ಲಿ ತೆರೆಕಂಡಿದೆ. ನಿರ್ದೇಶಕರು ವೈ.ಆರ್.ಸ್ವಾಮಿ. ಈ ಚಿತ್ರದಲ್ಲಿ ಅಳವಡಿಸಲಾಗಿರುವ ಕನಕದಾಸರ ಕೀರ್ತನೆಗಳನ್ನು ಪಿ.ಬಿ. ಶ್ರೀನಿವಾಸ್ ಅವರು ಹಾಡಿದ್ದಾರೆ. 'ಕುಲಕುಲಕುಲವೆಂದು ಹೊಡೆದಾಡದಿರಿ', 'ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ', 'ದೀನ ನಾನು ಸಮಸ್ತ ಲೋಕಕೆ ದಾನಿ ನೀನು' ಹಾಡುಗಳು ಜನಪ್ರಿಯವಾಗಿವೆ.

ಸ್ಮರಣೆ:
ಕನಕದಾಸ ಜಯಂತಿ:
ಕರ್ನಾಟಕ ಸರ್ಕಾರವು 2008ರಿಂದ ಕನಕದಾಸ ಜಯಂತಿಯನ್ನು ಆಚರಿಸುತ್ತಿದೆ. ಈ ದಿನ ಸರ್ಕಾರಿ ರಜೆ ಇರುತ್ತದೆ. 06/11/ 2017 ಕ್ಕೆ ಕರ್ನಾಟಕ ಸರ್ಕಾರದ ವತಿಯಿಂದ ಕನಕದಾಸರವರ ಜಯಂತಿಯ ದಶಮಾನೋತ್ಸವ ಆಚರಿಸಲಾಗಿದೆ. 

  ಈ  ಬಾರಿಯ (2024 ನೇ ಸಾಲಿನಲ್ಲಿನ)                    ಭಕ್ತ ಕನಕದಾಸರ ಜಯಂತಿ ಕರ್ನಾಟಕ ಸರ್ಕಾರದಿಂದ    ಆಚರಿಸಲ್ಪಡುತ್ತಿರುವ 17ನೇ ಜಯಂತಿಯಾಗಲಿದೆ.

ಇಂದಿನ ಈ  ಜಯಂತಿ ಹಾಲುಮತದ ಈ ಮಹಾನ ಚೇತನ್ ಅವರ 535ನೇ ಜಯಂತಿಯಾಗಿದೆ.


Msg Collected By:

Deepak S Ganachari

AMGMPS Udachan. Tq Afzalpur.

Tuesday, 12 September 2023

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2024

 1947 ಆಗಸ್ಟ್ 15 ರಂದು ಕರ್ನಾಟಕವು ದೇಶದ ಇತರ ಭಾಗಗಳೊಂದಿಗೆ ಸ್ವತಂತ್ರವಾದಾಗ, ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ರಾಜ್ಯದ ಕೆಲವು ಭಾಗಗಳಲ್ಲಿ ಇದು ಸಂಭವಿಸಲಿಲ್ಲ. ಹೈದರಾಬಾದ್ ಕರ್ನಾಟಕ ರಾಜ್ಯದ ಬೀದರ್, ಗುಲ್ಬರ್ಗಾ ಮತ್ತು ರಾಯಚೂರು ಗಳ ಈಶಾನ್ಯ ಜಿಲ್ಲೆಗಳ ದೊಡ್ಡ ಭಾಗಗಳನ್ನು ಒಳಗೊಂಡಿತ್ತು. ಈ ಪ್ರದೇಶಗಳಲ್ಲಿನ ಲಿಂಗಾಯತ ಅಲ್ಪಸಂಖ್ಯಾತರು ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಹೆಚ್ಚಾಗಿ ನಂಬಿದ್ದರು ಮತ್ತು ಇವರು ನಿಜಾಮ್ ಮತ್ತು ರಜಾಕರ ದಬ್ಬಾಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ನಿಜಾಮನು ತನ್ನ ಆಡಳಿತವನ್ನು ಬಲವಂತದಿಂದ ಉರುಳಿಸುವವರೆಗೂ ಭಾರತಕ್ಕೆ ಸೇರಲು ನಿರಾಕರಿಸಿದನು. ನಿಜಾಮರ ವಿರುದ್ಧದ 'ಪೊಲೀಸ್ ಕ್ರಮ'ದ ನಂತರ, ಹೈದರಾಬಾದ್ ಪ್ರಾಂತ್ಯ ಮತ್ತು ಅದರ ನಾಗರಿಕರು 17 ಸೆಪ್ಟೆಂಬರ್ 1948 ರಂದು ಸ್ವತಂತ್ರರಾದರು.


   ಈ ದಿನವನ್ನು ಮೊದಲು ಕರ್ನಾಟಕ ಸರ್ಕಾರವು 'ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ' ಎಂದು ಆಚರಿಸುತ್ತಿತ್ತು ಆದರೆ 17 ಸೆಪ್ಟೆಂಬರ್ 2019 ರಿಂದ ಈ ಆಚರಣೆಯನ್ನು 'ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ' ಎಂದು ಮರುನಾಮಕರಣ ಮಾಡಲಾಗಿದೆ. ಬೀದರ್, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ರಾಯಚೂರು ಈ 7 ಜಿಲ್ಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬರುತ್ತವೆ. ಈ ಜಿಲ್ಲೆಗಳು ಸೆಪ್ಟೆಂಬರ್ 17 ರಂದು ಭಾರತೀಯ ರಾಷ್ಟ್ರೀಯ ಧ್ವಜಾರೋಹಣ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಫೋಟೋ ಪೂಜೆ ಮಾಡುವ ಮೂಲಕ ಈ ದಿನವನ್ನು ಅತ್ಯಂತ ವೈಭವದಿಂದ ಆಚರಿಸುತ್ತವೆ.

    ಆರಂಭದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಕೆಲವು ಸಂಘಟನೆಗಳಷ್ಟೇ ಆಚರಿಸುತ್ತಿದ್ದವು. 2002 ರಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ, ಕೃಷ್ಣ, ರವರು ಈ ಮಹತ್ವದ ದಿನವನ್ನು ಸರಕಾರದ ವತಿಯಿಂದಲೇ ಆಚರಿಸಲು ನಿರ್ಧರಿಸಿದರು. ಅಂದಿನಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದಂದು ರಾಜ್ಯದ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಪರಂಪರೆ ಇದೆ.


  ಭಾರತದ ಸಂವಿಧಾನದ 371J ಕಲಂನಿಂದ ಈ ಭಾಗದಲ್ಲಿ ಇನ್ನೂ ಅಭಿವೃದ್ಧಿಯಾಗಬೇಕಿದೆ.


  2019ರಿಂದ ಕಲ್ಯಾಣ ಕರ್ನಾಟಕ ಉತ್ಸವ’ ಎಂಬ ಹೆಸರಿನಿಂದ ಪ್ರತಿವರ್ಷ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗದ ಆರು ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಛೇರಿಗಳು ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ 🇮🇳 *ರಾಷ್ಟ್ರ ಧ್ವಜಾರೋಹಣ ಮಾಡಲಾಗುತ್ತದೆ*. ಕಲ್ಯಾಣ ಕರ್ನಾಟಕದ ಹೋರಾಟಗಾರರಿಗೆ ನಮನ ಸಲ್ಲಿಸಲಾಗುತ್ತದೆ.*


   ಅದೇ ದಿನ ವಿಶ್ವಕರ್ಮ ಜಯಂತಿಯೂ ಬರುತ್ತದೆ. ಹಾಗಾಗಿ ಎಲ್ಲರೂ ಕಲ್ಯಾಣ ಕರ್ನಾಟಕ ಧ್ವಜಾರೋಹಣದ ನಂತರ ಈ ಜಯಂತಿಯನ್ನು ಆಚರಿಸಲು ಮರೆಯದಿರಿ.


GKLIGHTS (ದೀಪಕ್.ಎಸ್.ಗಣಾಚಾರಿ ) ತಂಡದಿಂದ ನಿಮಗೆಲ್ಲರಿಗೂ ಮುಂಚಿತವಾಗಿ ಕಲ್ಯಾಣ ಕರ್ನಾಟಕ ಆಚರಣೆ ದಿನಾಚರಣೆಯ ಶುಭಾಶಯಗಳು & ವಿಶ್ವಕರ್ಮ ಜಯಂತಿಯ ಶುಭಾಶಯಗಳು.

Monday, 8 August 2022

ಸ್ವಾತಂತ್ರ್ಯ ದಿನಾಚರಣೆಯ ಭಾಷಣ-2024

     ಈ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರೆ, ಗೌರವಾನ್ವಿತ ಮುಖ್ಯ ಅತಿಥಿಗಳೆ, ಶಿಕ್ಷಕರೆ,ಪಾಲಕರೇ,ಪೋಷಕರೆ ಮತ್ತು ನನ್ನ ಎಲ್ಲಾ ಆತ್ಮೀಯ ಸ್ನೇಹಿತರೆ ತಮಗೆಲ್ಲರಿಗೂ ಶುಭೋದಯ. ನಮ್ಮ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭ ಸಂದರ್ಭವನ್ನು ಆಚರಿಸಲು ನಾವೆಲ್ಲರೂ ಇಂದು ಇಲ್ಲಿ ಸೇರಿದ್ದೇವೆ. ಈ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು. ನಾವು 77 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿದ್ದೇವೆ ಮತ್ತು ಇಂದು ನಾವು 'ಘರ್ ಘರ್ ತಿರಂಗ' ಎಂದರೆ 'ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ' ಎಂಬ ಅಭಿಯಾನದೊಂದಿಗೆ ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.
ಇಂದು ಈ ಶುಭ ಸಂದರ್ಭದಲ್ಲಿ, ನಿಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗುತ್ತಿದೆ. ಈ ವರ್ಣರಂಜಿತ ಮತ್ತು ಅರ್ಥಪೂರ್ಣ ಸಂದರ್ಭದಲ್ಲಿ ನನ್ನ ಪದಗಳನ್ನು ಪ್ರಸ್ತುತ ಪಡಿಸಲು ಈ ಸುವರ್ಣ ಅವಕಾಶವನ್ನು ಒದಗಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು.

.     ನಮಗೆಲ್ಲರಿಗೂ ತಿಳಿದಿರುವಂತೆ ಬ್ರಿಟಿಷ್ ಸರ್ಕಾರವು ಭಾರತದ ಜನರನ್ನು ಹಲವಾರು ವರ್ಷಗಳಿಂದ ದಬ್ಬಾಳಿಕೆ ಮಾಡಿತು ಮತ್ತು ನಮ್ಮನ್ನು ಗುಲಾಮರನ್ನಾಗಿ ಇರಿಸಿತು ಆದರೆ ಬ್ರಿಟಿಷರೊಂದಿಗೆ ವಿವಿಧ ರೀತಿಯಲ್ಲಿ ಹೋರಾಡಿದ ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು, ಕ್ರಾಂತಿಕಾರಿಗಳು ಮತ್ತು ದೇಶಭಕ್ತರ ನಿರಂತರ ಪರಿಶ್ರಮವು ನಮ್ಮ ದೇಶವನ್ನು ಬ್ರಿಟಿಷ್ ಸಾಮ್ರಾಜ್ಯದಿಂದ ಮುಕ್ತಗೊಳಿಸಿತು. ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಟ ಮಾಡಿದ್ದರಿಂದ  ಅಂತಿಮವಾಗಿ ನಾವು 1947 ರಲ್ಲಿ ಆಗಸ್ಟ್ 15 ರಂದು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಆದ್ದರಿಂದ ಆಗಸ್ಟ್ 15 ಪ್ರತಿಯೊಬ್ಬ ಭಾರತೀಯನ ಗೌರವ ಮತ್ತು ಹೆಮ್ಮೆಯ ದಿನವಾಗಿದೆ. ಇದು ಭಾರತೀಯ ಇತಿಹಾಸದಲ್ಲಿ ಕೆಂಪು ಅಕ್ಷರದ ದಿನವಾಗಿದೆ.

.      ನಮ್ಮ ಸ್ವಾತಂತ್ರ್ಯವನ್ನು ಮರಳಿ ಪಡೆದ ನೆನಪಿಗಾಗಿ ನಾವು ಪ್ರತಿ ವರ್ಷ ಈ ದಿನವನ್ನು ಆಚರಿಸುತ್ತೇವೆ ಮತ್ತು ಅಮರ ಸೇವೆಗಾಗಿ ಈ ದಿನದಂದು ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ನಾವು ಗೌರವಿಸುತ್ತೇವೆ.

.      ಸತ್ಯ ಮತ್ತು ಅಹಿಂಸೆಯಂತಹ ಅಸ್ತ್ರಗಳನ್ನು ಬಳಸಿ ಬ್ರಿಟಿಷರನ್ನು ಭಾರತವನ್ನು ತೊರೆಯುವಂತೆ ಒತ್ತಾಯಿಸಿದ ಮಹಾತ್ಮ ಗಾಂಧೀಜಿ ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭ ಭಾಯಿ ಪಟೇಲ್ ಮುಂತಾದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಭಾರತದ ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದರು ಮತ್ತು ದೇಶವನ್ನು ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿದರು. ಇಂತಹ ಮಹಾನ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ಕ್ರಾಂತಿಕಾರಿಗಳನ್ನು ಇತಿಹಾಸದಲ್ಲಿ ಕಂಡುಕೊಂಡ ನಾವು ಬಹಳ ಅದೃಷ್ಟವಂತರು ಮತ್ತು ಅವರು ದೇಶವನ್ನು ಮಾತ್ರವಲ್ಲದೆ ಮುಂದಿನ ಪೀಳಿಗೆಯನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಿದರು.

.        ಸ್ವಾತಂತ್ರ್ಯ ಬಂದು 77 ವರ್ಷಗಳ ನಂತರ ಇಂದು ನಮ್ಮ ದೇಶ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯತ್ತ ಸಾಗುತ್ತಿದೆ. ನಮ್ಮ ದೇಶವು ಮಿಲಿಟರಿ ಶಕ್ತಿ, ಶಿಕ್ಷಣ, ಕ್ರೀಡೆ, ಕೃಷಿ, ಬಾಹ್ಯಾಕಾಶ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಪ್ರತಿದಿನ ಹೊಸ ಅಧ್ಯಾಯ ಅಥವಾ ಆಯಾಮವನ್ನು ಬರೆಯುತ್ತಿದೆ. ಈ ವೈಜ್ಞಾನಿಕ ತಂತ್ರಜ್ಞಾನದಿಂದಾಗಿ ಭಾರತ ಇಂದು ಚಂದ್ರ ಮತ್ತು ಮಂಗಳವನ್ನು ತಲುಪಿದೆ. ಪ್ರತಿದಿನ ವೈಜ್ಞಾನಿಕ ತಂತ್ರಜ್ಞಾನವನ್ನು ಆವಿಷ್ಕರಿಸುವ ಮೂಲಕ ನಾವು ದೇಶವನ್ನು ಹೊಸ ಪ್ರಗತಿಯತ್ತ ಕೊಂಡೊಯ್ಯುತ್ತಿದ್ದೇವೆ.

.      ಸ್ವಾತಂತ್ರ್ಯದ ಈ ಸಂದರ್ಭದಲ್ಲಿ ದೇಶದ ಪ್ರಗತಿಯ ಹೊಸ ಆಯಾಮಗಳ ಕುರಿತು ಚರ್ಚೆ ನಡೆಸುತ್ತಿರುವ ಸಂದರ್ಭದಲ್ಲಿ ನಮ್ಮ ಮಹಾನ ಸ್ವಾತಂತ್ರ್ಯ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ& ಗುಲಾಮಗಿರಿಯಿಂದ ನಮ್ಮನ್ನು ಮುಕ್ತಗೊಳಿಸಿದ ದೃಶ್ಯವನ್ನು ನಾವು ಎಂದಿಗೂ ಮರೆಯಬಾರದು. ಈ ಕಾರಣಕ್ಕಾಗಿಯೇ ನಾವು ಇಂದು ಸ್ವತಂತ್ರರಾಗಿದ್ದೇವೆ ಮತ್ತು ನಾವು ದಿನದಿಂದ ದಿನಕ್ಕೆ ಹೊಸ ಸಾಧನೆಗಳನ್ನು ಸಾಧಿಸುತ್ತಿದ್ದೇವೆ.

.    ಈ ಸ್ವಾತಂತ್ರ್ಯದ ನಿರಂತರ ಅನ್ವೇಷಣೆಯಲ್ಲಿ, ನಾವು ನಮ್ಮ ದೇಶದಲ್ಲಿ ಅನೇಕ ಮಹಾನ್ ವ್ಯಕ್ತಿಗಳನ್ನು ಕಳೆದುಕೊಂಡಿದ್ದೇವೆ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣದ ಬಗ್ಗೆಯೂ ಕಾಳಜಿ ವಹಿಸದ ಅನೇಕ ಮಹಾನ್ ವ್ಯಕ್ತಿಗಳು ನಮ್ಮ ದೇಶದಲ್ಲಿ ಜನಿಸಿದರು ಮತ್ತು ಅವರು ಈ ಪವಿತ್ರ ಮಾತೃಭೂಮಿಗಾಗಿ ಮನಃಪೂರ್ವಕವಾಗಿ ತ್ಯಾಗ, ಬಲಿದಾನ ಮಾಡಿದರು. ಇಂದಿಗೂ ಆ ಮಹನೀಯರನ್ನು ನೆನೆದು ನಮ್ಮ ಕಣ್ಣುಗಳು ತೇವವಾಗುತ್ತವೆ. ಆಧುನಿಕ ಕಾಲದಲ್ಲಿ, ಆ ಮಹಾನ್ ಕ್ರಾಂತಿಕಾರಿಗಳನ್ನು ನಾವು ಮರೆಯಬಾರದು, ಏಕೆಂದರೆ ಇಂದು ನಾವು ನಮ್ಮ ಜೀವನವನ್ನು ಮುಕ್ತವಾಗಿ ನಡೆಸುತ್ತಿದ್ದೇವೆ ಎಂದರೇ ಅದರ ಶ್ರೇಯ ಅವರಿಗೆ ಸಲ್ಲುತ್ತದೆ.

.      ಇದರೊಂದಿಗೆ ನಾನು ಹೇಳಲು ಬಯಸುತ್ತೇನೆ, ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ.
ನಾನು ನನ್ನ ದೇಶದ ಸಂಸ್ಕೃತಿ, ಸಂಪ್ರದಾಯ ಮತ್ತು ಪ್ರಕೃತಿಯನ್ನು ಪ್ರೀತಿಸುತ್ತೇನೆ. ನಾನು ಭಾರತೀಯನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ.

.      ಆ ಎಲ್ಲಾ ಮಹಾನ ಕ್ರಾಂತಿಕಾರಿಗಳು, ಯೋಧರು ಮತ್ತು ದೇಶಭಕ್ತರಿಗೆ ನನ್ನ ಅಪಾರ ಗೌರವ ಮತ್ತು ಶ್ರದ್ಧಾಂಜಲಿಗಳನ್ನು ಸಲ್ಲಿಸುವ ಮೂಲಕ ನಾನು ನನ್ನ ಭಾಷಣವನ್ನು ಕೊನೆಗೊಳಿಸುತ್ತೇನೆ.

.    ಇಲ್ಲಿಯವರೆಗೆ ನನ್ನ ಮಾತುಗಳನ್ನು ಆಲಿಸಿದ್ದಕ್ಕಾಗಿ ನಿಮಗೆಲ್ಲರಿಗೂ ಧನ್ಯವಾದಗಳು. ಮತ್ತೊಮ್ಮೆ ನಿಮಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

                     ಭಾರತ್ ಮಾತಾ ಕೀ ಜೈ.

.                                        ಲೇಖನ ಸಂಪಾದಕರು:
.                                     ದೀಪಕ್.ಎಸ್.ಗಣಾಚಾರಿ.

INDEPENDENCE DAY SPEECH FOR STUDENTS 2024

Good morning to respected Chairman sir of this institution,honourable chief guests, teachers, parents,guardians and my all dear friends. We have all gathered today here to celebrate the auspicious occasion of Amrit Mahotsav of Independence of our country. Many best wishes to all of you for this auspicious occasion. We have completed 77 years of independence on this event&today we are observing 78th Independence Day celebration countrywide with the motto Ghar Ghar Tiranga means Flag at every house. 
Today on this auspicious occasion, I am feeling happy to address you all. Thank you very much for providing me this fanatstic opportunity to explore my words in this colourful and meaningful occasion.

As we all know that the British government oppressed the people of India for many years and kept us as slaves but continuous hard effort of all our freedom fighters,revolutionaries&patriots who had fought with the British in various ways has freed our country from the British empire by putting their lives at stake. So finally we became completely independent on 15th Aug in 1947. So August 15 is a day of honour of regaining our pride back. It is the red letter day in the Indian history.

We celebrate every year this day in the remembrance of getting our freedom back and we honour those all freedom fighters& patriots on this day for their immortal service.

The most important contribution to the independence of our country has been made by Mahatma Gandhiji, who forced British to leave India by using weapons like truth and non-violence. There were many other freedom fighters like Subhash Chandra Bose, Bhagat Singh, Chandrashekhar Azad, Jawaharlal Nehru, Sardar Ballabh Bhai Patel,  etc. who contributed to the independence of India and liberated the country from British slavery. We are very fortunate to have found such great freedom fighters and revolutionaries in history and they liberated not only the country but also the coming generations from the slavery of the British.

Today, 77 years after independence, our country is moving towards progress in every field. Our country is writing a new chapter or dimension every day in different fields like Military strength, education, sports, agriculture, space science, technology, medical field and many other fields too. Due to this scientific technique, India has reached the moon and Mars today. By innovating scientific technology every day, we are taking the country towards new progress.

On this occasion of independence, while we are discussing the new dimensions of the progress of the country, we should never forget the scene of slavery where our great freedom fighters sacrificed their lives for freedom.

For this reason, we are free today and we are achieving new achievements day by day.

In the relentless pursuit of this freedom, we also lost many great people in our country. Many great people were born in our country who did not even care about their lives for the independence of the country and they had willingly sacrificed for this holy motherland. Even today, our eyes become moist by remembering those great people. In modern times, we should not forget those great revolutionaries, because today we are living our life freely, the credit goes to these people.

With this I want to say, I love my country.
I love my country's culture, tradition& nature. I am proud to be an Indian.

I end my speech by paying my huge respect and tributes to those all great revolutionaries,warriors&patriots.

Many thanks to all of you for listening to my words till here. Happy Independence Day wishes to you once again.

Bharat Mata ki Jay.

Article framed By:
Deepak.S.G.