Sunday, 31 January 2016

Difference between a Hyphen & a Dash.

HYPHENS AND DASHES:
A hyphen joins two or more words together while a dash separates words into parenthetical statements. They two are sometimes confused because they look so similar, but their usage is different. Hyphens are not separated by spaces, while a dash has a space on either side.

*HYPHENS:
Generally, hyphens are used to join two words or parts of words together while avoiding confusion or ambiguity. Consult your dictionary if you are not sure if a hyphen is required in a compound word, but remember that current usage may have shifted since your dictionary was published.
EXAMPLES: run-down, up-to-date.

There are some cases where hyphens preserve written clarity such as where there are letter collisions, where a prefix is added, or in family relations. Many words that have been hyphenated in the past have since dropped the hyphen and become a single word (email, nowadays).
EXAMPLES:
co-operate
bell-like
anti-nuclear
post-colonial
great-grandmother
son-in-law.

In some cases though, a hyphen does change the meaning of a sentence.
EXAMPLE:
I am thinking of re-covering my sofa
(= to put a new cover on it).
I would like to recover my sofa.
(= from someone who has borrowed or stolen it).

HYPHENS IN NUMBERS:
Use a hyphen with compound numbers from twenty-one to ninety-nine.
EXAMPLES:
fifty-one
eighty-nine
thirty-two
sixty-five.

In written fractions place a hyphen between the numerator and denominator except if there is already a hyphen in either the numerator or the denominator.
EXAMPLES:
two-fifths
one-third
three-tenths
nine-hundredths
sixty-nine eighty-ninths.

Use a hyphen when a number forms part of an adjectival compound.
EXAMPLES:
France has a 35-hour working week.
He won the 100-metre sprint.
Charles Dickens was a great nineteenth-century novelist.

**DASHES:
Dashes can be used to add parenthetical statements or comments in much the same way as you would use brackets. In formal writing you should use the bracket rather than the dash as a dash is considered less formal. Dashes can be used to create emphasis in a sentence.
EXAMPLES:
You may think she is a liar - she isn't.
She might come to the party - you never know.

It is the collected msg for GKLIGHTS.

Monday, 25 January 2016

Republic Day 2024 Short speech in English

Short Speech about Republic Day of India in English:

Good Morning everybody.I wish 'Happy 75nd (Seventy fifth) Republic  Day' to you all.     I would like to say something on the Happy occasion of 'Republic Day of India'. 26th January is the Red Letter Day in the Indian history& it is celebrated as Indian Republic Day every year. All Indian show their Dignity and Respect to the National Flag of India that get unfurled on this special day on several Places in India that include Institutes, Schools&colleges, Banks and many more Places. This day is celebrated all over the country on this day. It is true that India obtained its independence on August 15, 1947 but the Constitution of India came into force on January 26, 1950. The Constitution of India was formally adopted by the Parliament of India and India declared itself as a ‘Republic Country’ on January 26, 1950, thereafter this day is celebrated as Republic Day in India every year. Dr.B.R.Ambedkar&his team given us this constitution by studying constitution of various countries like Ireland,Canada, France,Australia &etc. Indian constitute is the lengthiest constitution among all countries constitution. It shows equality,directive principles for state, social justice for all&etc. To mark this occasion, a Grand parade is organized in New Delhi which is the Capital of India that starts from Raisina Hill near the Rashtrapati Bhavan (Presidential Palace), along the Rajpath, Past India Gate and end on to the historic Red Fort in the old quarter of the city. Different infantry, cavalry and mechanized regiments of the Indian Army, the Indian Navy and the Indian Air Force march in formation, decked in all their finery and official decorations. The President of India, who is also the Commander in Chief of the Indian Armed Forces, takes the salute.

Usually, the parade is a lively event with more than 100,000 people attending but the celebrations will be toned down this year due to the pandemic. This Republic Day will be celebrated in the midst of a pandemic situation.

   Every year a chief guest will be invited from other country to fulfill the meaning of 'Athithi Devo Bhava'.  But India didn’t have a chief guest for the parade in 1952, 1953 and 1966 & 2021

    This is the day which is celebrated in India& every Indian People show their respect and Pride towards the National Constitution that came under force on this same day. Thank you once again to all of you for giving me some time to share my words with you all. I honour our constitution&I am proud to be an Indian. Jai Hind.. Vande Matharam..

By:Deepak.S.G.

(Admin of GKLIGHTS).

See my YouTube channel: Deepak.S.Ganachari
for more interesting videos.

Saturday, 2 January 2016

Savitribai Phule Details 2024

ಸಾವಿತ್ರಿಬಾಯಿ ಫುಲೆ:

ಸಾವಿತ್ರಿಬಾಯಿ ಫುಲೆ(1831-1897)
ಸಾಮಾಜಿಕ ಹೋರಾಟಗಾರ್ತಿ,
ಮಹಿಳಾಹಕ್ಕುಗಳ ಹೋರಾಟಗಾರ್ತಿ,
ಭಾರತದ ಮೊಟ್ಟಮೊದಲ ಶಿಕ್ಷಕಿ,
ದಣಿವರಿಯದ ಸತ್ಯಶೋಧಕಿ&
ಆಧುನಿಕ ಶಿಕ್ಷಣದ ತಾಯಿ.

ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು.

ಜನನ, ಜೀವನ:

ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು.
ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಸಾವಿತ್ರಿಬಾಯಿ ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.

ವಿವಾಹ, ವಿದ್ಯಾಭ್ಯಾಸ:
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ 8 ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ 13 ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. 1847ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ 17 ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಾದ ಮೊದಲ ಶಿಕ್ಷಕಿಯಾದರು.

ಶಿಕ್ಷಕಿಯಾಗಿ:
ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು. ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು.

  1848ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಚಿಸಿದ್ದರು.

ಲೇಖಕಿಯಾಗಿ:
1854ರಲ್ಲಿ ಸಾವಿತ್ರಿಬಾಯಿಯವರು 'ಕಾವ್ಯಫೂಲೆ'(ಕಾವ್ಯ ಅರಳಿದೆ)ಎನ್ನುವ ಕವನಸಂಕಲನವನ್ನು ಪ್ರಕಟಿಸಿದರು. ಈ ಕಾವ್ಯವು 19ನೇ ಶತಮಾನದ ಸಮಾಜವನ್ನು ದಾಖಲಿಸುವಲ್ಲಿ ಮೈಲಿಗಲ್ಲಾಗಿದೆ. ಇವರು ಈ ಕೃತಿಯನ್ನು'ಅಭಂಗ್' ಶೈಲಿಯಲ್ಲಿ ರಚಿಸಿದ್ದಾರೆಂದು ವಿಮರ್ಶಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕೃತಿಯಿಂದಾಗಿ ಸಾವಿತ್ರಿಬಾಯಿಯವರನ್ನು ಮರಾಠಿ ಕಾವ್ಯದ ಪ್ರವರ್ತಕಿ ಎಂದು ಕರೆಯಲಾಗಿದೆ.

  ಅವರ ಎರಡನೇಯ ಕೃತಿ 'ಭವನಕಾಶಿ ಸುಬೋಧ ರತ್ನಾಕರ್'(ಅಪ್ಪಟ ಮುತ್ತುಗಳ ಸಾಗರ) 1891ರಲ್ಲಿ ಪ್ರಕಟವಾಯಿತು. ಇದು ಜ್ಯೋತಿಬಾ ಅವರನ್ನು ಒಳಗೊಂಡಂತೆ ಬರೆದ ಒಂದು ಬಯೋಗ್ರಫಿ.

ಮೂರನೆಯದು ಜ್ಯೋತಿಬಾ ಅವರ ಭಾಷಣಗಳ ಸಂಪಾದಿತ ಕೃತಿಯನ್ನು 1892ರಲ್ಲಿ ಸಂಪಾದಿಸಲಾಯಿತು.

  ನಾಲ್ಕನೇ ಕೃತಿ- ಕರ್ಜೆ(ಸಾಲ) ಎಂಬುದಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕೃತಿಗಳು ಇವಾಗಿವೆ.

ಕೃತಿಗಳು:
*ಕವನಸಂಕಲನ-ಕಾವ್ಯಫೂಲೆ (ಕಾವ್ಯ ಅರಳಿದೆ)-1854.
*ಆತ್ಮಕಥೆ-ಭವನಕಾಶಿ ಸುಬೋಧ ರತ್ನಾಕರ್ (ಅಪ್ಪಟ ಮುತ್ತುಗಳ ಸಾಗರ)-1891.
*ಸಂಪಾದಿತ ಕೃತಿ-ಜ್ಯೋತಿಬಾ ಅವರ ಭಾಷಣಗಳು -1892.
*ಪ್ರಬಂಧ-ಕರ್ಜೆ(ಸಾಲ).

ಆದರ್ಶ ಪತ್ನಿಯಾಗಿ:
  ಜ್ಯೋತಿಬಾ ಅವರ ತತ್ವ್ತ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ತಮ್ಮದಾಗಿಸಿಕೊಳ್ಳುವ ಸಾವಿತ್ರಿಬಾಯಿಯವರು ಜೀವಮಾನವಿಡೀ ಪತಿಯೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತಾರೆ. ಇವರಿಬ್ಬರ ನಡುವೆ ಒಂದು ಮಧುರವಾದ ಬಾಂಧವ್ಯ ಮತ್ತು ವೈಯಕ್ತಿಕ ಭಾವನೆಗಳನ್ನು ಗೌರವಿಸಿಕೊಳ್ಳುವ ಗುಣವಿತ್ತು. ಅವರಿಗೆ ಮಕ್ಕಳಿರದಿದ್ದರು ಸಂತೋಷವಾಗಿದ್ದರು. ಪತ್ನೀಯ ಮೇಲೆ ಅಗಾಧ ಪ್ರೀತಿ ಹೊಂದಿದ್ದ ಜ್ಯೋತಿಬಾ ಫುಲೆ ಅವರು ಮಕ್ಕಳಿಗಾಗಿ ಮರುಮದುವೆಯಾಗಲಿಲ್ಲ. ಮುಂದೆ ಫುಲೆ ದಂಪತಿಗಳು 1874ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು, ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ.

1863ರಲ್ಲಿ ಅನಾಥ ಮಕ್ಕಳಿಗಾಗಿ ಶಿಶುಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ. ಸಾಮಾಜಿಕ ಕ್ರಾಂತಿಕಾರಿಯಾಗಿ ಶಿಕ್ಷಣದ ಹಕ್ಕು, ಸರ್ವಶಿಕ್ಷಣ ಅಭಿಯಾನ ಬಿಸಿಯೂಟದ ಯೋಜನೆಗಳನ್ನು ಕ್ರಾಂತಿಕಾರಿ ಯೋಜನೆಗಳೆಂದು ಕೊಂಡಾಡಲಾಗುತ್ತಿದೆ. 150 ವರ್ಷಗಳ ಹಿಂದೆಯೇ ಸಾವಿತ್ತಿಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.

1860ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು. ಸಾವಿತ್ರಿಬಾಯಿ 'ಸತ್ಯೋಧಕ' ಸಮಾಜದ ಅಧ್ಯಕ್ಷೆಯಾಗಿದ್ದರು.

  19ನೇ ಶತಮಾನದ ಇತಿಹಾಸದಲ್ಲಿ ಹಿಂದೂ ಧಾರ್ಮಿಕ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ. ಬದಲಾವಣೆಯ ಹರಿಕಾರರಾಗಿ ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಚಳುವಳಿ ಸಂಘಟನೆಗಳನ್ನು ಸಂಘಟಿಸಿದರು.

1848 ರಲ್ಲಿ ಪತಿ ಜ್ಯೋತಿಬಾ ಫುಲೆಯವರೊಂದಿಗೆ ಸೇರಿ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು.

1855 ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿಪಾಳೆಯದ ಶಾಲೆ ಸ್ಥಾಪನೆ ಮಾಡಿದರು.

1868 ರಲ್ಲಿ ದಲಿತರಿಗಾಗಿ ಮನೆಯ ಕುಡಿಯುವ ನೀರಿನ ಟ್ಯಾಂಕನ್ನು ಬಿಟ್ಟುಕೊಟ್ಟರು. ಬ್ರಾಹ್ಮಣ ವಿಧವೆಯ ಮಗುವೊಂದನ್ನು ದತ್ತು ತೆಗೆದುಕೊಂಡರು. ಪಶ್ಚಿಮ ಮಹಾರಾಷ್ಟ್ರದ ಕ್ಷಾಮ ಪ್ರದೇಶಗಳಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. ಪ್ರಶಸ್ತಿ, ಗೌರವ ಶಿಕ್ಷಣ ಕೇತ್ರದಲ್ಲಿನ ಸಾಧನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಫುಲೆ ದಂಪತಿಗಳಿಗೆ ಸನ್ಮಾನ ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ ಥಾಮ್ ವುಲ್ಫ್ ಮತ್ತು ಸುಜನ ಆಂಡ್ರಡೆ - ಸಾವಿರಾರು ದೀಪಗಳನ್ನು ಹಚ್ಚಿದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆಗೆ ನೀನು ಚಿರಋಣಿಯಾಗಿರಬೇಕು.

  ದಮನಿತ ಸಮುದಾಯಗಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ಸ್ಥಾಪಿಸಿ, ಕ್ರಾಂತಿಕಾರಿ ಚಳುವಳಿ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಎಷ್ಟು ಜನರಿಗೆ ಗೊತ್ತಿದೆ ?

ಮೃದುವರ್ಮ - 150 ವರ್ಷಗಳ ಹಿಂದೆ ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ ಅದನ್ನು ನನಸಾಗಿಸಲು ಸಾವಿತ್ರಿಬಾಯಿ ಫುಲೆ ಶ್ರಮಿಸಿದ್ದಾರೆ. ಆದರಿಂದು ಸ್ತ್ರೀ ವಿಮೋಚನೆ ಫ್ಯಾಷನ್ ಆಗಿದೆ. ಗೋವಂಡೆ - ಫುಲೆ ದಂಪತಿಗಳ ಪ್ರಕಾರ ಹುಟ್ಟುವ ಪ್ರತಿಯೊಂದು ಮಗುವು ವಿಶೇಷವಾದುದು. ಮಕ್ಕಳು ಭೂಮಿಯ ಮೇಲಿನ ನಕ್ಷತ್ರಗಳು ಎಂದಿದ್ದಾರೆ. ಅವರ ಈ ಮಾತುಗಳಲ್ಲಿ ಎಷ್ಟೊಂದು ಸತ್ಯ ಅಡಗಿದೆ !

ನಿಧನ:
1897ರಲ್ಲಿ ಪ್ಲೇಗ್ ಪೀಡಿತ ರೋಗಿಗಳ ಸೇವೆಯಲ್ಲಿ ತೊಡಗಿದ್ದಾಗ ಸ್ವತಃ ಸಾವಿತ್ರಿಬಾಯಿ ಫುಲೆ ಅವರೇ ಆ ಕಾಯಿಲೆಯ ಸೋಂಕಿಗೆ ಬಲಿಯಾಗಿ ಕೊನೆಯುಸಿರೆಳೆದರು.ಮಹಾನ ಮಹಿಳಾ ಶಿಕ್ಷಣ ಚೇತನವೊಂದು ಭೌತಿಕವಾಗಿ ಮರೆಯಾಯಿತು.