1947 ಆಗಸ್ಟ್ 15 ರಂದು ಕರ್ನಾಟಕವು ದೇಶದ ಇತರ ಭಾಗಗಳೊಂದಿಗೆ ಸ್ವತಂತ್ರವಾದಾಗ, ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ರಾಜ್ಯದ ಕೆಲವು ಭಾಗಗಳಲ್ಲಿ ಇದು ಸಂಭವಿಸಲಿಲ್ಲ. ಹೈದರಾಬಾದ್ ಕರ್ನಾಟಕ ರಾಜ್ಯದ ಬೀದರ್, ಗುಲ್ಬರ್ಗಾ ಮತ್ತು ರಾಯಚೂರು ಗಳ ಈಶಾನ್ಯ ಜಿಲ್ಲೆಗಳ ದೊಡ್ಡ ಭಾಗಗಳನ್ನು ಒಳಗೊಂಡಿತ್ತು. ಈ ಪ್ರದೇಶಗಳಲ್ಲಿನ ಲಿಂಗಾಯತ ಅಲ್ಪಸಂಖ್ಯಾತರು ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಹೆಚ್ಚಾಗಿ ನಂಬಿದ್ದರು ಮತ್ತು ಇವರು ನಿಜಾಮ್ ಮತ್ತು ರಜಾಕರ ದಬ್ಬಾಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ನಿಜಾಮನು ತನ್ನ ಆಡಳಿತವನ್ನು ಬಲವಂತದಿಂದ ಉರುಳಿಸುವವರೆಗೂ ಭಾರತಕ್ಕೆ ಸೇರಲು ನಿರಾಕರಿಸಿದನು. ನಿಜಾಮರ ವಿರುದ್ಧದ 'ಪೊಲೀಸ್ ಕ್ರಮ'ದ ನಂತರ, ಹೈದರಾಬಾದ್ ಪ್ರಾಂತ್ಯ ಮತ್ತು ಅದರ ನಾಗರಿಕರು 17 ಸೆಪ್ಟೆಂಬರ್ 1948 ರಂದು ಸ್ವತಂತ್ರರಾದರು.
ಈ ದಿನವನ್ನು ಮೊದಲು ಕರ್ನಾಟಕ ಸರ್ಕಾರವು 'ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ' ಎಂದು ಆಚರಿಸುತ್ತಿತ್ತು ಆದರೆ 17 ಸೆಪ್ಟೆಂಬರ್ 2019 ರಿಂದ ಈ ಆಚರಣೆಯನ್ನು 'ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ' ಎಂದು ಮರುನಾಮಕರಣ ಮಾಡಲಾಗಿದೆ. ಬೀದರ್, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ರಾಯಚೂರು ಈ 7 ಜಿಲ್ಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬರುತ್ತವೆ. ಈ ಜಿಲ್ಲೆಗಳು ಸೆಪ್ಟೆಂಬರ್ 17 ರಂದು ಭಾರತೀಯ ರಾಷ್ಟ್ರೀಯ ಧ್ವಜಾರೋಹಣ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಫೋಟೋ ಪೂಜೆ ಮಾಡುವ ಮೂಲಕ ಈ ದಿನವನ್ನು ಅತ್ಯಂತ ವೈಭವದಿಂದ ಆಚರಿಸುತ್ತವೆ.
ಆರಂಭದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಕೆಲವು ಸಂಘಟನೆಗಳಷ್ಟೇ ಆಚರಿಸುತ್ತಿದ್ದವು. 2002 ರಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ, ಕೃಷ್ಣ, ರವರು ಈ ಮಹತ್ವದ ದಿನವನ್ನು ಸರಕಾರದ ವತಿಯಿಂದಲೇ ಆಚರಿಸಲು ನಿರ್ಧರಿಸಿದರು. ಅಂದಿನಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದಂದು ರಾಜ್ಯದ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಪರಂಪರೆ ಇದೆ.
ಭಾರತದ ಸಂವಿಧಾನದ 371J ಕಲಂನಿಂದ ಈ ಭಾಗದಲ್ಲಿ ಇನ್ನೂ ಅಭಿವೃದ್ಧಿಯಾಗಬೇಕಿದೆ.
2019ರಿಂದ ಕಲ್ಯಾಣ ಕರ್ನಾಟಕ ಉತ್ಸವ’ ಎಂಬ ಹೆಸರಿನಿಂದ ಪ್ರತಿವರ್ಷ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗದ ಆರು ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಛೇರಿಗಳು ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ 🇮🇳 *ರಾಷ್ಟ್ರ ಧ್ವಜಾರೋಹಣ ಮಾಡಲಾಗುತ್ತದೆ*. ಕಲ್ಯಾಣ ಕರ್ನಾಟಕದ ಹೋರಾಟಗಾರರಿಗೆ ನಮನ ಸಲ್ಲಿಸಲಾಗುತ್ತದೆ.*
ಅದೇ ದಿನ ವಿಶ್ವಕರ್ಮ ಜಯಂತಿಯೂ ಬರುತ್ತದೆ. ಹಾಗಾಗಿ ಎಲ್ಲರೂ ಕಲ್ಯಾಣ ಕರ್ನಾಟಕ ಧ್ವಜಾರೋಹಣದ ನಂತರ ಈ ಜಯಂತಿಯನ್ನು ಆಚರಿಸಲು ಮರೆಯದಿರಿ.
GKLIGHTS (ದೀಪಕ್.ಎಸ್.ಗಣಾಚಾರಿ ) ತಂಡದಿಂದ ನಿಮಗೆಲ್ಲರಿಗೂ ಮುಂಚಿತವಾಗಿ ಕಲ್ಯಾಣ ಕರ್ನಾಟಕ ಆಚರಣೆ ದಿನಾಚರಣೆಯ ಶುಭಾಶಯಗಳು & ವಿಶ್ವಕರ್ಮ ಜಯಂತಿಯ ಶುಭಾಶಯಗಳು.
No comments:
Post a Comment